3rd SEPTEMBER- DAILY CURRENT AFFAIRS BRIEF

3rd SEPTEMBER

 

 

1.ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ವಲಯ 6 ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ-ಎನ್‌ಜಿಟಿ ಆದೇಶ

SOURCE-THE HINDU https://www.thehindu.com/todays-paper/tp-national/tp-andhrapradesh/ngt-steps-in-to-conserve-ghats/article24851023.ece

 ವಿದ್ಯಾರ್ಥಿಗಳ ಗಮನಕ್ಕೆ

 ಪ್ರಿಲಿಮ್ಸ್ ಪರೀಕ್ಷೆಗಾಗಿ-ಕಸ್ತೂರಿರಂಗನ್ ಸಮಿತಿ ವರದಿ, ಪಶ್ಚಿಮ ಘಟ್ಟಗಳ ಪರಿಸರ-ಸೂಕ್ಷ್ಮ ವಲಯಗಳ ಬಗ್ಗೆ 

ಮುಖ್ಯ ಪರೀಕ್ಷೆಗಾಗಿ -ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಅವಲೋಕಿಸಿ

 

ಪ್ರಮುಖ ಸುದ್ದಿ

 

  • ಪಶ್ಚಿಮಘಟ್ಟ ದಲ್ಲಿ ಘೋಷಿತ ಪರಿಸರ ಸೂಕ್ಷ್ಮ ವಲಯದ ಪ್ರಮಾಣ ಕಡಿಮೆ ಮಾಡದಂತೆ ಮತ್ತು ಇನ್ನು 6 ತಿಂಗಳಲ್ಲಿ ಅಧಿ ಸೂಚನೆ ಹೊರಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್‌ಜಿಟಿ) ಆದೇಶಿಸಿದೆ. ಕೇರಳ ಹಾಗೂ ಕೊಡಗಿನಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತಕ್ಕೆ ಪ. ಘಟ್ಟದಲ್ಲಿ ಉಂಟಾ ಗಿರುವ ಪರಿಸರ ಹಾನಿಯೇ ಕಾರಣ ಎಂದು ಪರಿಸರ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎನ್‌ಜಿಟಿ ಈ ಆದೇಶ ನೀಡಿದೆ.

ಮುಖ್ಯ ಅಂಶಗಳು

  • ಸದ್ಯ ಕರ್ನಾಟಕ ಸಹಿತ ಆರು ರಾಜ್ಯಗಳಲ್ಲಿನ 56,825 ಚದರ ಕಿ.ಮೀ. ಭೂ ಭಾಗವನ್ನು ಪರಿಸರ ಸೂಕ್ಷ್ಮ ವಲಯ ಎಂದು ಪರಿಗಣಿಸಲಾಗಿದೆ. ಅಲ್ಲದೆ ಕರಡು ಅಧಿಸೂಚನೆ ಯಲ್ಲಿ ಯಾವುದೇ ಬದಲಾವಣೆ ಮಾಡದೆ ಮುಂದಿನ ಆರು ತಿಂಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದೂ ಎನ್‌ಜಿಟಿ ಆದೇಶಿಸಿದೆ. ಗೋವಾ ಫೌಂಡೇಶನ್‌ ಸಲ್ಲಿಸಿದ ದೂರಿನ ವಿಚಾರಣೆ ವೇಳೆ ಈ ಆದೇಶ ನೀಡಿರುವ ಎನ್‌ಜಿಟಿ, ಗುರುತಿಸಲಾದ ಭೂಭಾಗದಲ್ಲಿ ಇಳಿಕೆ ಮಾಡುವುದಾದಲ್ಲಿ ಮೊದಲು ತನ್ನ ಅನುಮತಿ ಪಡೆಯಬೇಕು ಎಂದೂ ಸೂಚಿಸಿದೆ.

 

ಹಿನ್ನಲೆ

  • ಪಶ್ಚಿಮಘಟ್ಟ ವಲಯ ಸಂರಕ್ಷಣೆ ಕುರಿತಂತೆ ಡಾ| ಕಸ್ತೂರಿರಂಗನ್‌ ವರದಿ ಆಧರಿಸಿ 2017ರ ಫೆಬ್ರವರಿ ಯಲ್ಲಿ ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯವು 56,825 ಚ.ಕಿ.ಮೀ. ವ್ಯಾಪ್ತಿಯ ಭೂಭಾಗವನ್ನು ಪರಿಸರ ಸೂಕ್ಷ್ಮ ವಲಯ ಎಂಬುದಾಗಿ ಘೋಷಿಸುವ ಕುರಿತು ಕರಡು ಅಧಿಸೂಚನೆ ಹೊರಡಿಸಿತ್ತು.
  • ಇದಕ್ಕೆ ಪ. ಘಟ್ಟ ವ್ಯಾಪ್ತಿಗೆ ಬರುವ ಕರ್ನಾಟಕ, ಗುಜರಾತ್‌, ಕೇರಳ, ಮಹಾರಾಷ್ಟ್ರ, ಗೋವಾ ಹಾಗೂ ತಮಿಳುನಾಡು ರಾಜ್ಯಗಳಿಂದ ಆಕ್ಷೇಪಣೆ ಕೇಳಿತ್ತು. ಇಸ್ರೋ ಮಾಜಿ ಮುಖ್ಯಸ್ಥ ಕೆ. ಕಸ್ತೂರಿರಂಗನ್‌ ಸಮಿತಿ 2013ರಲ್ಲಿ ಸಲ್ಲಿಸಿದ್ದ ವರದಿಯಲ್ಲಿ 59,940 ಚ. ಕಿ.ಮೀ. ಭೂಭಾಗವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಲಾಗಿತ್ತಾದರೂ 2017ರಲ್ಲಿ ಕರಡು ಅಧಿಸೂಚನೆ ಹೊರಡಿಸು ವಾಗ ಈ ಪೈಕಿ ಕೆಲವು ಪ್ರದೇಶಗಳನ್ನು ಕೈಬಿಡಲಾಗಿತ್ತು.

 

BACK TO BASICS

ಪರಿಸರಸೂಕ್ಷ್ಮ ವಲಯ ಇಂದರೇನು ?

 

  • ಸಂರಕ್ಷಿತ ಪ್ರದೇಶಗಳು , ರಾಷ್ಟ್ರೀಯ ಉದ್ಯಾನವನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ಸುತ್ತಲಿನ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ (MoEFCC), ಭಾರತ ಸರ್ಕಾರದಿಂದ ಪರಿಸರ-ಸೂಕ್ಷ್ಮ ವಲಯಗಳು (ESZs) ಅಥವಾ ಪರಿಸರವಿಜ್ಞಾನದ ದುರ್ಬಲ ಪ್ರದೇಶಗಳು (ಇಎಫ್ಎಗಳು) ಪ್ರದೇಶಗಳನ್ನು ಸೂಚಿಸುತ್ತವೆ . ಇಎಸ್ಝ್ಗಳನ್ನು ಘೋಷಿಸುವ ಉದ್ದೇಶವು ಇಂತಹ ಪ್ರದೇಶಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವ ಮೂಲಕ ರಕ್ಷಿತ ಪ್ರದೇಶಗಳಿಗೆ ಕೆಲವು ರೀತಿಯ “ಆಘಾತ ಅಬ್ಸಾರ್ಬರ್ಗಳನ್ನು” ರಚಿಸುವುದು. ಕಡಿಮೆ ರಕ್ಷಣೆಯ ಪ್ರದೇಶಗಳಲ್ಲಿ ಕಡಿಮೆ ಸಂರಕ್ಷಣೆ ಇರುವ ಪ್ರದೇಶಗಳಿಂದ ಅವರು ಸಂಕ್ರಮಣ ವಲಯವಾಗಿ ವರ್ತಿಸುತ್ತಾರೆ.

 

 

  • ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಒಂದು ಪರ್ವತ ಶ್ರೇಣಿಯಾಗಿದೆ. ಪಶ್ಚಿಮಘಟ್ಟದ ಶ್ರೇಣಿ, ಗುಜರಾತ್ ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಕನ್ಯಾಕುಮಾರಿಯವರೆಗೂ ಹಬ್ಬಿದೆ. ಇದು ಭಾರತದ ಪಶ್ಚಿಮ ರಾಜ್ಯಗಳನ್ನು ಒಳಗೊಂಡಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64, 280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 940 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ.(36.49%)

 

ಮಾದವ ಗಾಡ್ಗಿಲ್ ವರದಿ

 

  • ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆಯ ಉದ್ದೇಶದಿಂದ, ಅದರ ಬಗೆಗೆ ಪರಿಸರ ತಜ್ಞ ಮಾದವ ಗಾಡ್ಗಿಲ್‍ರ ಅಧ್ಯಕ್ಷತೆಯಲ್ಲಿ ಕೆಂದ್ರ ಸರ್ಕಾರ ಒಂದು ಸಮಿತಿ ರಚಿಸಿ ಅವರನ್ನು ಈ ವಿಷಯದಲ್ಲಿ ಒಂದು ವರದಿ ಕೊಡಲು ಕೆಂದ್ರ ಸರ್ಕಾರ ನೇಮಿಸಿತು. ಅವರು ಆಗಸ್ಟ್ 2011ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದರು.

 

  • ಈ ವರದಿಯಲ್ಲಿ ಶೇ 94-97% ಪಶ್ಚಿಮ ಘಟ್ಟಗಳ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಬೇಕೆಂದೂ ಮತ್ತು ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳವಾಗ ಅದು ಅಲ್ಲಿಯ ಪರಿಸರವನ್ನು ಜೀವ ವೈವಿಧ್ಯತೆಯ ಕ್ರಮವನ್ನು ಕೆಡಿಸದಿರುವ ಷರತ್ತಿನ ಮೇಲೆ ಅನುಮತಿ ನೀಡಬೆಕೆಂದು ಶಿಪಾರಸು ಮಾಡಿತು. ಈ ಭಾಗದಲ್ಲಿ ಬಹಳಷ್ಟು ತೋಟಗಳೂ, ವಸತಿ ಪ್ರದೇಶಗಳೂ, ಕೃಷಿ ಪ್ರದೇಶವೂ ಸೇರಿತ್ತು. ಇದರಲ್ಲಿ ಆಪ್ರದೇಶದ ಮುಕ್ಕಾಲು ಭಾಗವನ್ನು ನಿರ್ಬಂಧಿತ ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿತ್ತು. ಆ ಕಮಿಟಿಯ ಆಪ್ರದೇಶದಲ್ಲಿ ಯಾವುದೇ ದೊಡ್ಡ ಹೊಸ ಅಣೆಕಟ್ಟುಗಳನ್ನು ಕಟ್ಟುಬಾರದು, ಈ ಪ್ರದೇಶ ವಿಶೇಷ ರಕ್ಷಣೆ ಮತ್ತು ಅದರ ಭೂಲಕ್ಷಣ, ವನ್ಯಜೀವಿಗಳ ಕಾಳಜಿ, ಫಲವತ್ತಾದ ಭೂಮಿಯನ್ನು ಉಳಿಸುವ ಅಗತ್ಯವಿದೆ. ಈ ಪ್ರದೇಶದಲ್ಲಿ, ಕೆಲವು ಐತಿಹಾಸಿಕ ಮೌಲ್ಯಗಳು ಸಹ ಇವೆ ಇತ್ಯಾದಿ ಕಾರಣಗಳನ್ನು ಕೊಟ್ಟಿತ್ತು.
  • ಈ ಗಾಡ್ಗೀಳ್ ಸಮಿತಿ ವರದಿಯು ತೀವ್ರ ಟೀಕೆಗೆ ಒಳಗಾಯಿತು. ಅದು ಎದುರಿಸಿದ ಮುಖ್ಯ ಟೀಕೆಯೆಂದರೆ, ಇದು ವಾಸತ್ವಸ್ಥತಿಗಳ ಬಗ್ಗೆ ಗಮನ ಹರಿಸದೆ ಹೆಚ್ಚು ಪರಿಸರಸ್ನೇಹಿ ಮತ್ತು ಕಾಳಜಿ ಹೊಂದಿದೆ. ಈ ವರದಿಯಲ್ಲಿ ಅದರ ಶಿಫಾರಸು ಕಾರಣ ಆಗುವ ಆದಾಯದ ನಷ್ಟ ದ ಬಗೆಗೆ ಯಾವುದೇ ಪರಿಹಾರ ಅಥವಾ ಕ್ರಮಗಳನ್ನು ನೀಡುವುದಿಲ್ಲ, ಎಂಬುದಾಗಿತ್ತು.

 

ಕಸ್ತೂರಿರಂಗನ್ ಸಮಿತಿ ವರದಿ

 

  • ಗಾಡ್ಗೀಳ್ ಸಮಿತಿ ವರದಿಯ ಕುಂದು ಕೊರತೆಯನ್ನು ನೀಗಿಸಲು ಕಸ್ತೂರಿರಂಗನ್ ಸಮಿತಿಯನ್ನು ನೇಮಿಸಲಾಯಿತು. ಕಸ್ತೂರಿರಂಗನ್ ಸಮಿತಿ ತನ್ನ ವರದಿಯನ್ನು , 2013 ರ ಏಪ್ರಿಲ್ ರಂದು ಸಲ್ಲಿಸಿತು. ಇತರ 10 ಸದಸ್ಯರ ಸಮಿತಿಯ ಜೊತೆ, ಕೆ.ಕಸ್ತೂರಿರಂಗನ್ ಸಿದ್ಧಪಡಿಸಿದ ಪಶ್ಚಿಮ ಘಟ್ಟಗಳ ಈ ಕಸ್ತೂರಿರಂಗನ್ ವರದಿಯನ್ನು ಸರ್ಕಾರ ಸ್ವೀಕರಿಸಿದೆ.

 

ವರದಿಯ  ಮುಖ್ಯಾ೦ಶಗಳು

 

  • ಕಸ್ತೂರಿ ರಂಗನ್‍ಸಮಿತಿ ಗುರುತಿಸಿರುವ ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಸಾವಿರ ಚ,ಕಿ.ವ್ಯಾಪ್ತಿಯ ಪ್ರದೇಶ (49%) ಇಕೋಸೆನ್ಸಿಟಿವ್ ಏರಿಯಾ(ಇಎಸ್ ಎ) ಕ್ಕೆ ಒಳಪಟ್ಟು ನಿರ್ಭಂಧಿತವಾಗಿರುತ್ತದೆ. ಈ ಪ್ರದೇಶದಲ್ಲಿ ಗಣಿಗಾರಿಕೆ, ಕ್ವಾರಿ, ಮರಳುಗಾರಿಕೆ ಪರಿಸರ ವಿರೋಧಿ ಕೈಗಾರಿಕೆ, ಜಲವಿದ್ಯುತ್, ಪವನ ವಿದ್ಯುತ್ ಯೋಜನೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಎಲ್ಲಾರೀತಿಯ ಗಣಿಗಾರಿಕೆ ಮುಂದಿನ 5 ವರ್ಷ ಮುಗಿತ್ತಿದ್ದಂತೆ ಸ್ಥಗಿತಗೊಳಿಸಬೇಕು. 20,000 ಚ,ಮೀ, ದೊಡ್ಡದಾದ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಇಎಸ್ ಎನಿಂದ 10ಕಿ.ಮೀ. ವ್ಯಾಪ್ತಿಯಲ್ಲ ಯಾವುದೇ ಕಾಮಗಾರಿ ಪರಿಸರ ಇಲಾಖೆ, ಸ್ಥಲೀಯ ಗ್ರಾಮಸಭೆ ಅನುಮತಿ ಪಡೆಯಬೇಕು. ಈಪ್ರದೇಶದಲ್ಲಿ ಸಿಮೆಂಟು, ಕಲ್ಲು, ರಸಾಯನಿಕ ಬಳಸಲು, ಜನವಸತಿ ನಿರ್ಮಿಸಲು ಅವಕಾಶವಿಲ್ಲ.

 

ಪರಿಣಾಮಗಳು

 

  • ಡಾ.ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನ ಮಾಡಿದರೆ ಪಶ್ಚಿಮ ಘಟ್ಟ ಮತ್ತು ಮಲೆನಾಡು ಪ್ರದೇಶವನ್ನು ಅತೀ ಸೂಕ್ಷ್ಮ ಪರಿಸರ ವಲಯವೆಂದು ಘೋಷಣೆ ಮಾಡಲಾಗುತ್ತದೆ. ಒಂದು ಬಾರಿ ಸೂಕ್ಷ್ಮ ವಲಯವೆಂದು ಘೋಷಣೆ ಮಾಡಿದರೆ ಇಲ್ಲಿ ಯಾವುದೇ ರೀತಿಯ ಚಟುವಟಿಕೆಯನ್ನು ನಡೆಸುವಂತಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ತನ್ನ ಹತೋಟಿಯನ್ನು ಕಳೆದುಕೊಂಡು ಕೇಂದ್ರ ಸರ್ಕಾರದ ಸುಪರ್ದಿಗೆ ನೀಡಬೇಕಾಗುತ್ತದೆ. ಪಶ್ಚಿಮ ಘಟ್ಟದಲ್ಲಿ ಅಪರೂಪದ ಪ್ರಾಣಿಪಕ್ಷಿಗಳು, ಗಿಡಮೂಲಿಕೆಗಳು, ವನ್ಯಜೀವಿಗಳು ಇರುವುದರಿಂದ ಇವುಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತದೆ. ಅಲ್ಲದೆ ದಶಕಗಳಿಂದಲೂ ಅರಣ್ಯ ಪ್ರದೇಶದಲ್ಲಿ ರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸಬೇಕಾಗುತ್ತದೆ. ಅಲ್ಲದೆ ವಿದ್ಯುತ್, ನೀರಾವರಿ, ಕೈಗಾರಿಕೆ ಸೇರಿದಂತೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಜಾರಿ ಮಾಡಬೇಕಾದರೆ ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯಬೇಕು.

 

ಕಸ್ತೂರಿ ರಂಗನ್ ವರದಿ ಏಕೆ ಬೇಡ?’

 

  • ಈ ವರದಿ ರೂಪಿಸಿರುವುದರಲ್ಲೇ ದೋಷವಿದೆ. ಇದು ಜನ ಸಮುದಾಯದ ಬೇಡಿಕೆಯಲ್ಲ. ವರದಿ ಸಿದ್ಧಪಡಿಸುವಾಗ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಿಲ್ಲ’ ಎಂಬ ಕೂಗಿದೆ . ‘ಕಸ್ತೂರಿರಂಗನ್‌ ವರದಿ ವಿದೇಶಿ ಸಂಸ್ಥೆ ಪ್ರಾಯೋಜಿತ ವರದಿ. ಈ ವರದಿ ಅನುಷ್ಠಾನಗೊಂಡರೆ ಪರಿಸರ ಸಂರಕ್ಷಣೆ ಅಸಾಧ್ಯ. ಹಾಗಾಗಿ, ಕಸ್ತೂರಿರಂಗನ್‌ ಹಾಗೂ ಗಾಡ್ಗೀಳ್ ವರದಿಗಳನ್ನು ಸಂಪೂರ್ಣ ವಿರೋಧಿಸಬೇಕು . ಪ್ರಸ್ತುತ ಜಾರಿಯಲ್ಲಿ ಇರುವ ವಿವಿಧ ಕಾನೂನುಗಳ ಮೂಲಕವೇ ಅರಣ್ಯ ಸಂರಕ್ಷಣೆ ಮಾಡಬಹುದು, ಪಶ್ಚಿಮ ಘಟ್ಟ ಉಳಿಸಬೇಕು ಎಂಬ….CLICK HERE TO READ MORE
Share